March 24, 2026

ಈಜಲು ತೆರಳಿದ ಕಾರ್ಕಳ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಮೃತ್ಯು

0
image_editor_output_image765332231-1687139767611

ಶಿವಮೊಗ್ಗ: ತುಂಗಾನದಿಯಲ್ಲಿ ಈಜಲು ತೆರಳಿದ್ದ ಉಪನ್ಯಾಸಕರಿಬ್ಬರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿ ನಡೆದಿದೆ.

ಪುನೀತ್ (38), ಬಾಲಾಜಿ (36) ನೀರುಪಾಲಾದ ಉಪನ್ಯಾಸಕರು. ಇವರಿಬ್ಬರೂ ಕಾರ್ಕಳದ ನಿಟ್ಟೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರೂ ಜೊತೆಯಾಗಿ ತುಂಗಾನದಿಯಲ್ಲಿ ಈಜಲು ತೆರಳಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮುಳುಗಿದ ಇಬ್ಬರಲ್ಲಿ ಓರ್ವ ಉಪನ್ಯಾಸಕನ ಮೃತದೇಹ ಪತ್ತೆಯಾಗಿದೆ.

ಇನ್ನೋರ್ವ ಉಪನ್ಯಾಸಕನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!