July 3, 2026

ಪ್ರೀತಿಸುತ್ತಿದ್ದ ಯುವಕ, ಯುವತಿಯನ್ನು ಹತ್ಯೆ ಮಾಡಿ ಮೊಸಳೆಗಳಿಗೆ ಎಸೆದ ಪೋಷಕರು

0
image_editor_output_image-232741029-1687151266084.jpg

ಭೋಪಾಲ್: ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಆಕೆಯ ಪೋಷಕರೇ ಹತ್ಯೆ ಮಾಡಿ ಮೊಸಳೆಗಳಿಗೆ ಎಸೆದ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ.

ಆರೋಪಿಗಳು ಹೇಳಿದ ಚಂಬಲ್ ನದಿ ಪ್ರದೇಶದಲ್ಲಿ ಹುಡುಕಾಟ ನಡೆಯುತ್ತಿದ್ದು ಇಲ್ಲಿಯವರೆಗೂ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಘಟನೆ ಎರಡು ವಾರಗಳ ಹಿಂದೆ ನಡೆದಿದ್ದು, ಕೆಲವು ಸಂಬಂಧಿಕರ ಜೊತೆ ಸೇರಿ ಆರೋಪಿಗಳು ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಗುಂಡು ಹಾರಿಸಿ ಕೊಂದಿದ್ದಾರೆ.

ಬಳಿಕ ನದಿಯಲ್ಲಿ ಮುಳುಗಿಸಿದ್ದಾರೆ. ಪ್ರಕರಣದಲ್ಲಿ ಮರ್ಯಾದ ಹತ್ಯೆಯ ಶಂಕೆ ವ್ಯಕ್ತವಾಗಿದೆ ಎಂದು ಮೊರೆನಾ ಎಸ್‍ಪಿ ಶೈಲೇಂದ್ರ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ರತನ್‍ಬಸಾಯಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಶಿವಾನಿ (18) ಪಕ್ಕದ ಗ್ರಾಮದ ಬಲುಪುರ ನಿವಾಸಿ ರಾಧೇಶ್ಯಾಮ್ ತೋಮರ್ (21) ಎಂಬಾತನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಜಾತಿ ಸಮಸ್ಯೆಗಳಿಂದ ಯುವತಿ ಕುಟುಂಬದ ವಿರೋಧವಿತ್ತು ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!