May 13, 2026

ಅಪರಿಚಿತ ವಾಹನ ಢಿಕ್ಕಿ: ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಮೃತ್ಯು

0
image_editor_output_image-2067567521-1687153027484.jpg

ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ‌ ಪರಿಣಾಮ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು- ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಹಿರೀಕಳಲೆ ಗ್ರಾಮದ ಸಂದೇಶ್ (25), ಮರಡಹಳ್ಳಿಯ ಭರತ್ (23) ಮೃತಪಟ್ಟವರು.

ಎಳನೀರು ವ್ಯಾಪಾರ ಮಾಡುತ್ತಿದ್ದ ಯುವಕರು ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಕೆ.ಆರ್.ಪೇಟೆಯಿಂದ ಕಿಕ್ಕೇರಿ ಕಡೆ ಬರುವಾಗ ಘಟನೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಸಾಧ್ಯತೆ ಇದೆ, ವಾಹನ ಪತ್ತೆಗೆ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!