ಫೋನ್ ನಲ್ಲಿ ಮಾತಾಡಿಕೊಂಡೇ ಬಸ್ ಚಾಲನೆ: ಸೇತುವೆಗೆ ಢಿಕ್ಕಿ, 26 ಮಂದಿಗೆ ಗಾಯ
ಛತ್ತೀಸ್‌ಗಢ: ಬಸ್ಸೊಂದು ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದಲ್ಲಿ ನಡೆದಿದೆ.
ಬಸ್ ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವೇಗವಾಗಿ ರಸ್ತೆ ಬದಿಯ ರೈಲ್ವೇ ಸೇತುವೆಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಬಸ್ ನಲ್ಲಿದ್ದ 26 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ರಾಯಗಢ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ತನಿಖೆ ನಡೆಸಿದ್ದಾರೆ. ಚಾಲಕ ಫೋನಿನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.




