March 24, 2026

ಕಾಂಗ್ರೆಸ್ ಹೈಕಮಾಂಡ್‌‌ನಿಂದ ಜಗದೀಶ್ ಶೆಟ್ಟರ್‌‌ಗೆ ವಿಧಾನ ಪರಿಷತ್ ಟಿಕೆಟ್

0
IMG-20230619-WA0026.jpg

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ, ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಗೊಂಡಿರುವ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು ಅವರ ಹೆಸರನ್ನು ಘೋಷಿಸಲಾಗಿದ್ದು, ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಇನ್ನು ಜೂನ್‌ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದು, ಜೂನ್ 20( ಮಂಗಳವಾರ) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಜೂನ್‌ 21 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ.

ಜೂನ್‌ 30 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

Leave a Reply

Your email address will not be published. Required fields are marked *

error: Content is protected !!