March 24, 2026

ಡಿಸೆಂಬರ್‌ ಒಳಗೆ ಕಾಂಗ್ರೆಸ್ ಸರ್ಕಾರ ಪತನ: ಭವಿಷ್ಯ ನುಡಿದ ನಳಿನ್‌ ಕುಮಾರ್‌ ಕಟೀಲ್‌
 

0
nalin_kateel-sixteen_nine.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭವಿಷ್ಯ ನುಡಿದಿದ್ದು, ಡಿಸೆಂಬರ್‌ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎ೦ದು ಹೇಳಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡುತ್ತಾ, ಸಿಎಂ ಅಧಿಕಾರ ಹಂಚಿಕೆ ಸೂತ್ರವೇ
ಕಾಂಗ್ರೆಸ್‌ಗೆ ಮುಳುವಾಗಲಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಕಲಹದಿಂದ ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ.

ಅಧಿಕಾರ ಹಂಚಿಕೆ ವಿಷಯಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಪಕ್ಷದಲ್ಲಿ ದೊಡ್ಡ ಗಲಾಟೆ ಆಗಲಿದ್ದು, ಅದು ಸರ್ಕಾರದ ಪತನಕ್ಕೆ ಕಾರಣವಾಗಲಿದೆ. ಸಿದ್ದರಾಮಯ್ಯ ಬಣದವರು ಅವರೇ ಮುಂದಿನ ಐದು ವರ್ಷಗಳ ಕಾಲ ಸಿಎಂ ಎಂದು ಹೇಳಲು ಆರಂಭಿಸಿದ್ದಾರೆ. ಹೀಗಾಗಿ 2023ರ ಅಂತ್ಯದ ವೇಳೆಗೆ ಸರ್ಕಾರ ಉರುಳಲಿದೆ ಎಂದು ಹೇಳಿದ್ದಾರೆ.

ಎಲ್ಲವೂ ಉಚಿತ ಎಂದು ಹೇಳಿ ಸರ್ಕಾರ ರಾಜ್ಯದ ಜನರನ್ನು ವಂಚಿಸುತ್ತಿದ್ದು , ಜೂ.22 ರಂದು ರಾಜ್ಯ ಬಂದ್ ಗೆ ಕರೆ ನೀಡಿರುವ ಕೈಗಾರಿಕಾ ವಾಣಿಜ್ಯ ಮಂಡಳಿ ಹೋರಾಟಕ್ಕೆ ಬಿಜೆಪಿ ಬೆಂಬಲಿಸುತ್ತದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!