March 24, 2026

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹತ್ಯೆಗೀಡಾಗಿದ್ದ 6 ಕುಟುಂಬಗಳಿಗೆ 25 ಲಕ್ಷ ಪರಿಹಾರ ಚೆಕ್ ವಿತರಿಸಿದ ಸಿಎಂ ಸಿದ್ದರಾಮಯ್ಯ
 

0
IMG-20230619-WA0016.jpg

ಬೆಂಗಳೂರು: ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೋಮು ರಾಜಕಾರಣಕ್ಕೆ ಬಲಿಯಾದ ಬಳಿಕವೂ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ವಿತರಿಸಿ ಮಾತನಾಡಿದ ಅವರು, ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಪರಿವಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.

ಇನ್ನು ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂದಿದ್ದರೆ.

ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಹೇಳಿದ್ದಾರೆ.”

Leave a Reply

Your email address will not be published. Required fields are marked *

error: Content is protected !!