ಪುತ್ತೂರು| ಕಾರು, ದ್ವಿಚಕ್ರ ವಾಹನದ ನಡುವೆ ಅಪಘಾತ: ನೈತ್ತಾಡಿ ಮೂಲದ ನಿವಾಸಿ ಮೃತ್ಯು
ಪುತ್ತೂರು: ಕಾರು ಹಾಗೂ ಆ್ಯಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಕಲ್ಲರ್ಪೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ನೈತ್ತಾಡಿ ಮೂಲದ ನಿವಾಸಿಯಾಗಿರುವ ಇಸ್ಮಾಯಿಲ್ . ಅಡಿಕೆ ವ್ಯಾಪಾರಸ್ಥರಾಗಿರುವ ಇವರು, ಅಜ್ಜಿಕಟ್ಟೆ ಜಮಾತ್ ಕಮಿಟಿ ಸದಸ್ಯರಾಗಿದ್ದಾರೆ.
ಮಂಗಳವಾರ ಬೆಳಿಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಹಾದಿಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಓರ್ವ ಪುತ್ರ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.




