ಪುತ್ತೂರು: ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣ: ಡಿವೈಎಸ್ಪಿಗೆ ಜಾಮೀನು
ಪುತ್ತೂರು: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್‌ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್‌ಸ್ಟೆಬಲ್ ಹರ್ಷಿತ್‌ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಡಿವೈಎಸ್ಪಿ ವೀರಯ್ಯ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.




