ಕಾಪು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
ಕಾಪು: ಮಲ್ಲಾರು ಗ್ರಾಮದ ಕುಡ್ತಿಮಾರು ಉರ್ದು ಶಾಲೆಯ ಬಳಿಯ ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮಲ್ಲಾರು-ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಹತ್ತಿರದ ನಿವಾಸಿ ಅಬ್ದುಲ್ ರಜಾಕ್ (48) ಮೃತ ವ್ಯಕ್ತಿ.
ಶುಕ್ರವಾರ ಬೆಳಿಗ್ಗೆ 06:30 ಗಂಟೆಯಿಂದ 08:00 ಗಂಟೆಯ ನಡುವೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ಯಾವುದೋ ರೈಲು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





