ಕಂಜಿಕೋಡ್‌ನಲ್ಲಿರುವ ಕೈಗಾರಿಕಾ ಘಟಕದಲ್ಲಿ ಸ್ಫೋಟ: ಓರ್ವ ಸಾವು, ಹಲವರಿಗೆ ಗಾಯ
ಕೇರಳ: ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿರುವ ಕೈಗಾರಿಕಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,ಹಲವರಿಗೆ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಮೃತ ವ್ಯಕ್ತಿಯನ್ನು 22 ವರ್ಷದ ಅರವಿಂದನ್ ಎಂದು ಗುರುತಿಸಲಾಗಿದೆ. ಈ ವೇಳೆ ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.
ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್ ಮಾಡುತ್ತಿದ್ದಅರವಿಂದನ್. ಪ್ರಾಥಮಿಕ ತನಿಖೆಯ ಪ್ರಕಾರ, ಕುಲುಮೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿಬರಬಹುದು ಎಂದು ಪೊಲೀಸರು ಹೇಳಿದ್ದಾರೆ.




