March 24, 2026

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

0
IMG-20230620-WA0021.jpg

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಲಾಗಿದ್ದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್‌ಪಿ) ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ನೇಮಕ ಮಾಡಲಾಗಿದೆ.

ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.

2013ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ರಿಷ್ಯಂತ್ ಅವರು ಈ ಹಿಂದೆ ದಾವಣಗೆರೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು.

ಬೆಂಗಳೂರಿನವರಾದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತು ದಾವಣಗೆರೆಯ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!