March 24, 2026

ಕರ್ನಾಟಕದಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ: ದ.ಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

0
IMG-20230620-WA0022.jpg

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ಸೇರಿದಂತೆ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರಗಳಲ್ಲಿಯೂ ಮಳೆಯಾಗಿದ್ದು, ಹಾಸನದಲ್ಲಿ ಧಾರಾಕಾರ ಮಳೆಯಿಂದ 25ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ.

ಇನ್ನು ಸಮುದ್ರ ಮಟ್ಟದಿಂದ 900 ಮೀಟರ್ ಎತ್ತರದಲ್ಲಿ ತಮಿಳುನಾಡಿನ ಭಾಗದಲ್ಲಿ ಸುಳಿಗಾಳಿ ಸೃಷ್ಟಿಯಾಗಿದ್ದರಿಂದ ಹಾಗೂ ಬಿಪೋರ್​​ಜಾಯ್ ಪರಿಣಾಮದಿಂದ ಮಳೆಯಾಗಿದೆ.

Leave a Reply

Your email address will not be published. Required fields are marked *

error: Content is protected !!