July 4, 2026

ಕಾಂಪೌಂಡ್ ಹತ್ತುವ ವೇಳೆ ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

0
image_editor_output_image1777670257-1687325517989.jpg

ದಾವಣಗೆರೆ: ಕಾಂಪೌಂಡ್ ಹತ್ತುವ ವೇಳೆ ಜಾರಿ ಬಿದ್ದು ವಿದ್ಯಾರ್ಥಿನಿ ಸಾವನ್ನಪಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರತಾಲೂಕಿನಲ್ಲಿ ನಡೆದಿದೆ.

ಹರಿಹರದ ಮಾನ್ಯತಾ ಪಬ್ಲಿಕ್ ವಸತಿ ಕಾಲೇಜ್‌ನಲ್ಲಿ ಘಟನೆ ನಡೆದಿದ್ದು, ಸಿನಿಕ್ಷಾ (16) ಕಾಂಪೌಂಡ್‌ನಿಂದ ಜಾರಿಬಿದ್ದು ಮೃತಪಟ್ಟಿದ್ದಾಳೆ.

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಶಶಿಕಾಂತ್ ದಂಪತಿಯ ಪುತ್ರಿಯಾದ ಈಕೆ ಕಳೆದ ನಾಲ್ಕು ದಿನಗಳ ಹಿಂದಷ್ಟೇ ವಸತಿ ಶಾಲೆಗೆ ಸೇರಿದ್ದಳು. ಮಂಗಳವಾರ ರಾತ್ರಿ 11:30ರ ವೇಳೆಗೆ ವಸತಿ ಶಾಲೆಯ ಕಾಂಪೌಂಡ್ ಹತ್ತುವ ಸಂದರ್ಭ ಸಿನಿಕ್ಷಾ ಜಾರಿ ಬಿದ್ದಿದ್ದಾಳೆ.

ಘಟನೆಯಿಂದ ತೀವ್ರ ಗಾಯಗೊಂಡಿದ್ದ ಸಿನಿಕ್ಷಾಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾಳೆ.

ವಿದ್ಯಾರ್ಥಿನಿ ರಾತ್ರಿಯ ವೇಳೆ ಕಾಂಪೌಂಡ್ ಯಾಕೆ ಏರಿದಳು ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You may have missed

error: Content is protected !!