ಉಳ್ಳಾಲ: ಬಸ್ ಅಪಘಾತದಿಂದ ಪಾದಚಾರಿ ಮಹಿಳೆ ಪಾರು, ಘಟನೆಯ ವೀಡಿಯೋ ವೈರಲ್
ಉಳ್ಳಾಲ: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ.
ಮಂಗಳೂರು ಮುಡಿಪು ಚಲಿಸುವ ಗೋಪಾಲಕೃಷ್ಣ ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ.ಈ ವೇಳೆ ಎದುರಿನಿಂದ ಬಸ್ ಬಂದಿದೆ.
ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.




