March 24, 2026

ಬೆಳ್ತಂಗಡಿ|ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

0
image_editor_output_image-98605277-1687329029458.jpg

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ.

ಮೃತ ಯುವಕ ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು ಈ ಹಿನ್ನಲೆಯಲ್ಲಿ ಬೆಳಿಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!