March 24, 2026

ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

0
image_editor_output_image-1616163245-1687336119410.jpg

ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ಬಳಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ಗಂಜಿಗಟ್ಟೆ ಗ್ರಾಮದ ನಿವಾಸಿ ಮಹಂತೇಶ್ (30) ಮೃತ ದುರ್ದೈವಿ. ಬೆಳಗ್ಗೆ ಚಿಕ್ಕಮ್ಮನಹಳ್ಳಿಯಿಂದ ಗಂಜಿಗಟ್ಟೆ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ.

ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿರುವ ವಾಹನ ಈತನ ಬೈಕಿಗೆ ಡಿಕ್ಕಿಯಾಗಿರುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!