ವಿಟ್ಲ: ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು “ಟ್ಯಾಲೆಂಟಾನ್” ಕಾರ್ಯಕ್ರಮ
ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಹೂಸತಾಗಿ ದಾಖಲಾಗಿರುವ ಮಕ್ಕಳಿಗೆ “ಟ್ಯಾಲೆಂಟಾನ್ ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಜೂನ್ 21 ರ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಯೋಗಾಭ್ಯಾಸ ಮಾಡಿ ಯೋಗದ ಮಹತ್ವ ವನ್ನು ತಿಳಿಸಿಕೊಡಲಾಯಿತು.
ಅಪರಾಹ್ನ ಹಮ್ಮಿಕೊಂಡಿದ್ದ “ಟ್ಯಾಲೆಂಟಾನ್” ಸ್ಪರ್ಧೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಹೊಸದಾಗಿ ದಾಖಲಾತಿ ಪಡೆದಿರುವ ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಅವಕಾಶ ನೀಡಲಾಗಿತ್ತು. ಭಾಗವಹಿಸಿದ ಮಕ್ಕಳ ಗಾಯನ, ನೃತ್ಯ, ಚಿತ್ರಕಲೆ, ಭಾಷಣ, ಅಭಿನಯ ಹೀಗೆ ಹಲವು ಪ್ರತಿಭೆಗಳನ್ನು ಗುರುತಿಸಿ ಪ್ರಶಂಸಿಲಾಯಿತು.
ಕಾರ್ಯಕ್ರಮದ ಸಮಾರೋಪ ಸಭೆಯಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಯುವ ಪ್ರತಿಭೆ ಆಶಿಕ್ ಕುಕ್ಕಾಜೆ ಮಾತನಾಡಿ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಕೆಲಸ ಜನಪ್ರಿಯ ಶಾಲೆಯಲ್ಲಿ ನಡೆಯುತ್ತಿದ್ದು ಮಕ್ಕಳ ಸರ್ವತ್ತೋಮುಖ ಬೆಳವಣಿಗೆಗೆ ಇದು ಸಹಕಾರಿಯಾಗಲಿದೆ ಎಂದು ಭಾವಹಿಸಿದ ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ನಿರ್ದೇಶಕ ನೌಶೀನ್ ಬದ್ರಿಯಾ, ಪ್ರಾಂಶುಪಾಲ ಲಿಬಿನ್ ಕ್ಸೇವಿಯರ್, ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.




