March 24, 2026

ಸುಳ್ಯ: ಸ್ವಿಫ್ಟ್ ಕಾರು ಮತ್ತು ಕಂಟೈನರ್ ನಡುವೆ ಅಪಘಾತ: ನಾಲ್ವರು ಗಂಭೀರ ಗಾಯ

0
IMG-20230621-WA00271.jpg

ಸುಳ್ಯ: ಸ್ವಿಫ್ಟ್ ಕಾರು ಮತ್ತು ಕಂಟೈನರ್ ನಡುವೆ ಅಪಘಾತ ಸಂಭವಿಸಿದ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ನಡೆದಿದೆ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ಬುಧವಾರ ರಾತ್ರಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು ಧರ್ಮಸ್ಥಳದಿಂದ ಸಂಪಾಜೆ ಮೂಲಕ ಮಡಿಕೇರಿಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಗಾಯಾಳುಗಳು ಮೈಸೂರು ಮೂಲದವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ವಿವರ ಇನ್ನಷ್ಟೆ ತಿಳಿದು ಬರಬೇಕಿದೆ

Leave a Reply

Your email address will not be published. Required fields are marked *

error: Content is protected !!