March 24, 2026

ಕುಂದಾಪುರ: 31 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image365394737-1687413306861.jpg

ಕುಂದಾಪುರ: ಕಳೆದ 31ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯನ್ನು ಕುಂದಾಪುರ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾವೇರಿ ಮೂಲದ ಪ್ರಸ್ತುತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ನಿವಾಸಿ ಹೊನ್ನ ಯಾನೆ ಹೊನ್ನಪ್ಪ (55) ಬಂಧಿತ ಆರೋಪಿಯಾಗಿದ್ದಾನೆ.

ಇಲ್ಲಿನ ಶಂಕರನಾರಾಯಣ ಗ್ರಾಮದಲ್ಲಿ 1993ರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾ ಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹೊನ್ನಪ್ಪನನ್ನು ಜೂ. 20 ನೇ ತಾರೀಕಿನಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಶಂಕರನಾರಾಯಣ ಪೊಲೀಸರು ಬಂಧಿಸಿ ಜೂನ್ 21ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!