May 11, 2026

ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ: ಸಾರಿಗೆ ಬಸ್ ನಿರ್ವಾಹಕನಿಗೆ ಹಲ್ಲೆ

0
image_editor_output_image-1479439711-1687414308149.jpg

ಚಿತ್ರದುರ್ಗ: ಸಾರಿಗೆ ಬಸ್ ನಿರ್ವಾಹಕನೊಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಸಿದ್ದಕ್ಕೆ ಆಕೆಯ ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ಗುರುವಾರ ಚಳ್ಳಕೆರೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಹಲ್ಲೆಗೊಳಗಾದ ನಿರ್ವಾಹಕನನ್ನು ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ತೆರಳುತ್ತಿದ್ದ ಬಸ್‍ನಲ್ಲಿ ಮಹಿಳೆ ಬುಧವಾರ ಚಳ್ಳಕೆರೆಯಿಂದ ದಾಬಸ್ ಪೇಟೆಗೆ ಪ್ರಯಾಣಿಸುತ್ತಿದ್ದಳು.

ದಾಬಸ್ ಪೇಟೆಯಲ್ಲಿ ಬಸ್ ನಿಲ್ಲಿಸುವಂತೆ ಮಹಿಳೆ ಹೇಳಿದ್ದಳು. ಆದರೆ ಅಲ್ಲಿ ಬಸ್ ನಿಲ್ಲಿಸದೇ ನಿರ್ವಾಹಕ ನಿಯಮದಂತೆ ಮೆಜಸ್ಟಿಕ್‍ನಲ್ಲಿ ಬಸ್ ನಿಲ್ಲಿಸಿದ್ದಾನೆ. ಇದರಿಂದ ಸಿಟ್ಟಾದ ಮಹಿಳೆ ನಿರ್ವಾಹಕನೊಂದಿಗೆ ಗಲಾಟೆ ಮಾಡಿದ್ದಾಳೆ. ಅಲ್ಲದೇ ಕುಟುಂಬಸ್ಥರ ಬಳಿ ನಿರ್ವಾಹಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾಳೆ

Leave a Reply

Your email address will not be published. Required fields are marked *

error: Content is protected !!