ಹಾಸನ: ತಾಯಿಗೆ ಮೆಸೇಜ್ ಕಳಿಸಿ ಆತ್ಮಹತ್ಯೆ ಮಾಡಿಕೊಂಡ ಒಂಬತ್ತನೇ ತರಗತಿಯ ವಿದ್ಯಾರ್ಥಿ
ಹಾಸನ: ‘ಅಮ್ಮಾ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸು’ ಎಂದು ತಾಯಿಗೆ ಮೊಬೈಲ್‌ನಲ್ಲಿ ಮೆಸೇಜ್ ಕಳುಹಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಪೂರ್ವಿಕಾ(15) ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಾಲಕಿ ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದಳು.
ಮೆಸೇಜ್ ನೋಡಿದ ತಾಯಿ ಕೂಡಲೇ ದಿಗಿಲುಗೊಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಆದರೆ ಅವರು ಬರುವಷ್ಟರಲ್ಲಿಯೇ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿಂದ ಬಾಲಕಿ ಶವಕ್ಕಾಗಿ ಶೋಧಕಾರ್ಯ ನಡೆದಿದೆ.
ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಆತ್ಮಹತ್ಯೆಗೆ ಏನು ಕಾರಣ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





