ಮಂಗಳೂರಿನ ವಿವಿಯ ಪ್ರತಿಭಾ ದಿನಾಚರಣೆಗೆ ಹಿಂದು ಜಾಗರಣ ವೇದಿಕೆ ಮುಖಂಡನಿಗೆ ಆಹ್ವಾನ
ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನಲ್ಲಿ ಜೂನ್ 23ರಂದು ಪ್ರತಿಭಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು.
ಇದಕ್ಕೆ ಎನ್ಎಸ್‌ಯುಐ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಜೊತೆಗೆ ಕಾಲೇಜು ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಕುಲಪತಿಗೆ ದೂರು ನೀಡಿದ್ದರು.
ಇದಕ್ಕೆ ಪೂರಕ ಸ್ಪಂದನೆ ಸಿಗದ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಶ್ರೀಕಾಂತ್ ಶೆಟ್ಟಿ ಅತಿಥಿಯಾಗಿ ಆಗಮಿಸಿದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಪ್ರಾಂಶುಪಾಲರು ಕಾರ್ಯಕ್ರಮ ಮುಂದೂಡಿದ್ದಾರೆ. ಈ ಎರಡೂ ದಿನ ಎಂದಿನಂತೆ ತರಗತಿ ನಡೆಯಲಿದೆ. ವಿದ್ಯಾರ್ಥಿಗಳು ಸಮಸ್ತ್ರ ಧರಿಸಿ ಬರುವಂತೆ ಸೂಚಿಸಿದ್ದಾರೆ.





