ಕಡಬ: ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಕಡಬ : ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ 45 ವರ್ಷದ ಧರ್ಮರಾಜ ಮುತ್ಲಾಜೆ ಜೀವಾಂತ್ಯ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.
ಧರ್ಮರಾಜದ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಎಲಿಮಲೆ ರಬ್ಬರ್ ಪ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎನ್ನಲಾಗಿದೆ.
ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಬೇಕಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.





