ಡೇ ಕೇರ್ ನಲ್ಲಿ ಮಗುವಿಗೆ ಮತ್ತೊಂದು ಮಗುವಿನಿಂದ ನಿರಂತರ ಹಲ್ಲೆ: ಬೆಚ್ಚಿ ಬೀಳಿಸುವ ವೀಡಿಯೋ ವೈರಲ್
ಬೆಂಗಳೂರು: ಶಿಶುಪಾಲನಾ ಕೇಂದ್ರವೊಂದರಲ್ಲಿ ಮೂರು ವರ್ಷದ ಬಾಲಕ 2 ವರ್ಷದ ಬಾಲಕಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಬಿಕೇರ್ ಕೇಂದ್ರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸುಬ್ರಮಣ್ಯನಗರ ಪೊಲೀಸರು ನೋಟೀ ಸ್ ನೀಡಿದ್ದಾರೆ.
ಮತ್ತೊಂದೆಡೆ ರಾಜ್ಯ ಮಕ್ಕಳ ಹಕ್ಕುಗಳ ಅಯೋ ಗವು ಘಟನೆ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.
ಎಷ್ಟು ವರ್ಷಗಳಿಂದ ಡೇ ಕೇರ್ ನಡೆಸಲಾಗುತ್ತಿದೆ? ಶಿಕ್ಷಣ ಇಲಾಖೆ ಯಿಂದ ಅನುಮತಿ ಪಡೆಯಲಾಗಿದೆಯೇ? ಮಕ್ಕಳ ಸುರಕ್ಷತೆಗೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಾ? ಎಂಬುದರ ಬಗ್ಗೆ ಡೇ ಕೇರ್‌ಸೆಂಟರ್ ಮಾಲೀಕರಿಗೆ ಪೊಲೀಸರು ನೋಟೀಸ್ ನೀಡಿದ್ದಾರೆ.ಜತೆಗೆ ಡೇ ಕೇರ್‌ಗೆ ಅನುಮತಿ ನೀಡಲಾಗಿದೆಯೇ ಎಂಬ ಬಗ್ಗೆ ಮಾಹಿತಿ ನೀಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೂ ಸೂಚಿಸಲಾಗಿದೆ.
ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಲ್ಲಸಂದ್ರ ದಲ್ಲಿ ಡೇ ಕೇರ್‌ನಲ್ಲಿ ಎರಡು ವರ್ಷದ ಬಾಲಕಿ ಮೇಲೆ ಮೂರು ವರ್ಷದ ಬಾಲಕ ಹಲ್ಲೆ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣ ದಲ್ಲಿ ವಿಡಿಯೋ ವೈರಲ್ ಆಗಿತ್ತು.ಘಟನೆಗೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿ ತ್ತು. ಈ ಹಿನ್ನೆಲೆಯಲ್ಲಿ ಡೇ ಕೇರ್ ತಾತ್ಕಾಲಿಕ ಬಂದ್ ಮಾಡಲಾಗಿದೆ. ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಸುಬ್ರಮಣ್ಯಪುರ ಪೊಲೀಸರು ಡೇ ಕೇರ್‌ಗೆ ದೌಡಾಯಿಸಿ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಅಲ್ಲದೆ ಬಾಲಕಿಯ ಪೋಷಕರಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.ಎಂದು ಪೊಲೀಸರು ತಿಳಿಸಿದ್ದಾರೆ.
ಕೇರ್ ಸೆಂಟರ್‌ನಲ್ಲಿ ಸಾಕಷ್ಟು ಮಕ್ಕಳಿದ್ದರು. ಕೊಠಡಿಯೊಂದರಲ್ಲಿ ಹಲ್ಲೆಗೊಳಗಾದ ಬಾಲಕಿ ಜತೆಗೆ ಬಾಲಕ ಸೇರಿ ಏಳು ಮಕ್ಕಳಿದ್ದರು. ಮಗುವೊಂದು ಶೌಚಾಲಯಕ್ಕೆ ತೆರಳಲು ಹೋಗಬೇಕಾಗಿದ್ದರಿಂದ ಸಿಬ್ಬಂದಿ ಕರೆದುಕೊಂಡು ಹೋಗಿದ್ದರು. ಈ ಮಧ್ಯೆ ಬಾಲಕ ಬಾಲಕಿ ಗೆ ಹೊಡೆದಿದ್ದ. ನಿರಂತರವಾಗಿ ಏಳು ನಿಮಿಷಗಳ ಕಾಲ ಸೆರೆ ಯಾದ ವಿಡಿಯೋದಲ್ಲಿ ಹಲವು ಬಾರಿ ಹಲ್ಲೆ ಮಾಡಿದ್ದಾನೆ. ಪೋಷಕರು ಬಾ ಲಕಿಯನ್ನು ಮನೆಗೆ ಕರೆದೊಯ್ಯಲು ಬಂದಾಗ ಮುಖದ ಮೇಲೆ ಕೆನ್ನೆ ಹಾಗೂ ಕೈಗಳ ಮೇಲೆ ಗಾಯದ ಗುರುತು ಇರುವುದನ್ನು ಕಂಡಿ ದ್ದಾರೆ. ಇತರ ಮಕ್ಕಳಿಂದ ಮಾಹಿತಿ ಪಡೆದಿದ್ದರು. ಕೊಠಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿತ್ತು.




