March 24, 2026

ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಸಾವು

0
image_editor_output_image-310289567-1687581687439.jpg

ಚಿಕ್ಕಬಳ್ಳಾಪುರ: ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕಾರ್ಖಾನೆ ಪೇಟೆಯಲ್ಲಿ ನಡೆದಿದೆ.

ನವ ವಿವಾಹಿತೆ ತೇಜಸ್ವಿನಿ (20) ಮೃತಪಟ್ಟ ಗೃಹಿಣಿ. ಮನೆಯ ಕೊಠಡಿಯೊಂದರಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ಪತಿ ಲೋಹಿತ್‌ ನಿಂದ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಘಟನಾ ಸ್ಥಳದಲ್ಲಿ ಮೃತ ತೇಜಸ್ವಿನಿ ತಂದೆ ಮಂಜುನಾಥ್ ಆಕ್ರಂದನ ಮುಗಿಲುಮುಟ್ಟಿದೆ. ಮಗಳನ್ನು ನೆನೆದು ತಂದೆ ಗೋಳಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಿಪಿಐ ರಾಜು ಹಾಗೂ ತಹಶೀಲ್ದಾರ್ ಗಣಪತಿ ಶಾಸ್ತ್ರೀ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!