ಮಂಗಳೂರು | ಕುಲಶೇಖರದ ಕಾಂಪ್ಲೆಕ್ಸ್ ನಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರು ದಾಳಿ: ಇಬ್ಬರು ಮಹಿಳೆಯರ ರಕ್ಷಣೆ, ಓರ್ವನ ಬಂಧನ
ಮಂಗಳೂರು : ಮಂಗಳೂರು ನಗರದ ಕುಲಶೇಖರದ ಕಾಂಪ್ಲೆಕ್ಸ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಸಂದರ್ಭ ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರದ ಬಳಿ ಇರುವ ಅಬ್ಬಿ ಕಾಂಪ್ಲೆಕ್ಸ್ ನಲ್ಲಿ ಕೃಷ್ಣ ಎಂಬಾತನು ಫ್ಲಾಟ್ ಬಾಡಿಗೆಗೆ ಪಡೆದು ಮಂಡ್ಯ ನಿವಾಸಿ ಲಕ್ಕಪ್ಪ ಎಂಬಾತನ ಜೊತೆ ಸೇರಿ ಈ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಪೊಲಿಸರು ಮಾಹಿತಿ ನೀಡಿದ್ದಾರೆ.
ದಾಳಿ ಸಂದರ್ಭ ಅಲ್ಲಿದ್ದ ಇಬ್ಬರು ನೊಂದ ಮಹಿಳೆಯರನ್ನು ಸಂರಕ್ಷಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ಮಂಡ್ಯ ಮೂಲದ ಲಕ್ಕಪ್ಪ(25 ವರ್ಷ),ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.




