ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದಾಗ ವಿದ್ಯುತ್ ಶಾಕ್: ಮಹಿಳೆ ಸಾವು
ನವದೆಹಲಿ: ಮಹಿಳೆಯೊಬ್ಬಳು ವಿದ್ಯುತ್ ಶಾಕ್‍ನಿಂದ ಮೃತಪಟ್ಟ ಘಟನೆ ದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಮೃತ ಮಹಿಳೆಯನ್ನು ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಎಂದು ತಿಳಿದು ಬಂದಿದೆ.
ವಿದ್ಯುತ್ ಶಾಕ್‍ನಿಂದ ಕುಸಿದುಬಿದ್ದಿದ್ದ ಮಹಿಳೆಯನ್ನು ಅಲ್ಲಿದ್ದ ಜನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.





