December 15, 2025

ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ: ಐವರು ಪೊಲೀಸರ ಅಮಾನತು

0
image_editor_output_image142850215-1687721127032.jpg

ಉತ್ತರ ಕನ್ನಡ; ವಿಚಾರಣೆಗೆ ಕರೆತಂದ ಆರೋಪಿ ಜೂನ್ 24ರಂದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯ ಪಿಐ, ಪಿಎಸ್ಐ ಸೇರಿ ಐವರನ್ನು ಅಮಾನತು ಮಾಡಲಾಗಿದೆ.

ಜೂನ್ 24ರಂದು ಬಿಹಾರ ಮೂಲದ ವ್ಯಕ್ತಿ ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಠಾಣೆಯ ಪಿಐ ಮಂಜುನಾಥ್, ಠಾಣೆಯ ಕ್ರೈ ಪಿಎಸ್ಐ ಮಂಜೇಶ್ವರ್ ಚಂದಾವರ, ಪೊಲೀಸ್ ಸಿಬ್ಬಂದಿಗಳಾದ ಮಹಾವೀರ, ರಮೇಶ್, ಸಂತೋಷ್ ಅಮಾನತುಗೊಂಡಿದ್ದಾರೆ.

ಈತ ಪಾಲೀಷ್ ಮಾಡಿ ಕೊಡುವ ನೆಪದಲ್ಲಿ ಬಂಗಾರ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮೂಲದ ಇಬ್ಬರನ್ನು ಹೊನ್ನಾವರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಇನ್ನು ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆಂದು ಠಾಣೆಗೆ ಕರೆದುತಂದಿದ್ದು, ಆ ವೇಳೆ ನೀರು ಕುಡಿಯುತ್ತೇನೆ ಎಂದು ಹೇಳಿ ಬ್ಯಾಗಿನಲ್ಲಿದ್ದ ವಿಷ ಕುಡಿದಿದ್ದ. ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ದುರದೃಷ್ಟವಶಾತ್ ಆರೋಪಿ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!