ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು
ಕುಂದಾಪುರ: ದೇವಸ್ಥಾನದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿದ ಘಟನೆ ರವಿವಾರ ರಾತ್ರಿ ವೇಳೆ ನಡೆದಿದೆ.
ಹುಡುಕಾಟದ ಬಳಿಕ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ಕಾಳಾವರ ನರಿಕೊಡ್ಲು ಮನೆ ನಿವಾಸಿ ಹರೀಶ್ ಪೂಜಾರಿ (37) ಮೃತ ದುರ್ದೈವಿ. ಭಾನುವಾರ ಮಳೆಯಿದ್ದ ಕಾರಣ ಮೀನು ಶಿಕಾರಿಗಾಗಿ ಹರೀಶ್ ಪೂಜಾರಿ ಹಾಗೂ ಮೂವರು ಸ್ನೇಹಿತರು ಕಾಳಾವಾರ ದೇವಸ್ಥಾನದ ಸಮೀಪದ ಕೆರೆಗೆ ತೆರಳಿದ್ದು ಈ ವೇಳೆ ಮೀನು ಹಿಡಿಯಲು ಹರೀಶ್ ನೀರಿಗಿಳಿದು ಈಜಿದ್ದಾರೆ.
ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.




