March 24, 2026

ಸುಳ್ಯ: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
 

0
IMG-20230504-WA0062.jpg

ಸುಳ್ಯ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಾಲಕಿಯ ಹೇಳಿಕೆಯ ಮೇರೆಗೆ ಇನ್ನಿಬ್ಬರನ್ನು ಬಂಧಿಸಿದ್ದಾರೆ.

ಸುಳ್ಯ ತಾಲೂಕಿನ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು.

ಅದರಂತೆ ಪೊಲೀಸರು ಕಲ್ಮಡ್ಕದ ಚಿದಾನಂದ ಎಂಬಾತನನ್ನು ಬಂಧಿಸಿದ್ದರು. ಇದೀಗ ವಿಚಾರಣೆ ಮುಂದುವರಿಸಿದ ಪೊಲೀಸರು ಬಾಲಕಿಯಿಂದ ಹೇಳಿಕೆ ಪಡೆಯುತ್ತಿರುವ ಸಂದರ್ಭ ಆಕೆ ಬೇರೆ ಬೇರೆ ಸಮಯದಲ್ಲಿ ಇನ್ನಿಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ ಹಿನ್ನೆಲೆಯಲ್ಲಿ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಕೊಡಿಯಾಲದ ಚೇತನ್ ಕಾಯರ್ತಡ್ಕ, ದರ್ಶನ್ ಕಾಯರ್ತಡ್ಕ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ಳಾರೆ ಪೊಲೀಸರು ಫೋಕ್ಸೋ ಪ್ರಕರಣದ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!