ಬೆಂಗಳೂರು-ಧಾರವಾಡ ಸೇರಿದಂತೆ ಐದು ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಚಾಲನೆ
ಧಾರವಾಡ: ಬೆಂಗಳೂರು-ಧಾರವಾಡ ಸೇರಿದಂತೆ ಐದು ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.
ಮಧ್ಯ ಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ನಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಸಮಾರಂಭದಲ್ಲಿ ರಾಣಿ ಕಮಲಾಪತಿ-ಜಬಾಲ್ಪುರ, ಖಜುರಾಹೊ- ಭೂಪಾಲ್- ಇಂದೋರ್, ಗೋವಾದ ಮಂಡಗಾವ್- ಮುಂಬೈ, ಧಾರವಾಡ- ಬೆಂಗಳೂರು, ಹಟಿಯಾ- ಪಾಟ್ನಾ ನಡುವೆ ಸಂಚರಿಸಲು ರೈಲುಗಳಿಗೆ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದರು.





