ಮಂಗಳೂರು: ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿರುವ ವಿಡಿಯೋ ವೈರಲ್ ವಿಚಾರ:
ಡಾ.ರತ್ನಾಕರ್ ಮಹಿಳಾ ಪೊಲೀಸ್ ಠಾಣಾ ವಶಕ್ಕೆ
ಮಂಗಳೂರು: ಡಾ.ರತ್ನಾಕರ್ ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ಚೆಲ್ಲಾಟವಾಡಿರುವ ವಿಡಿಯೋ, ಫೋಟೋ ಸಹಿತ ಇಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಬೆನ್ನಲ್ಲೇ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತೆಯೋರ್ವರು ಮಂಗಳೂರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಕಠಿಣ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ಅಮಾನತಾದ ವೈದ್ಯಾಧಿಕಾರಿ ಡಾ.ರತ್ನಾಕರನನ್ನು ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಹೋದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವೈದ್ಯಾಧಿಕಾರಿ ಡಾ. ರತ್ನಾಕರ ಎಂಬುವವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಮಾನತು ಮಾಡಿತ್ತು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರು ಈ ಬಗ್ಗೆ ಮಹಿಳಾ ಠಾಣೆಯ ಪೊಲೀಸರು ಸಂಪರ್ಕಕ್ಕೆ ಸಿಕ್ಕ ಮಹಿಳಾ ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ. ಆದರೆ, ಅವರಲ್ಲಿ ಯಾರೂ ದೂರು ನೀಡಲು ಮುಂದೆ ಬರುತ್ತಿಲ್ಲ. ಆದರೆ, ತನಿಖೆಗೆ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ.






