ಮಂಗಳೂರು: ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಿ 10 ಲಕ್ಷ ರೂ. ಸುಲಿಗೆ: ಯುವತಿ ಸಹಿತ 7 ಮಂದಿಯ ಬಂಧನ
ಮಂಗಳೂರು: ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಹನಿಟ್ರ್ಯಾಪ್‌ಗೆ ಬೀಳಿಸಿ 10 ಲಕ್ಷ ರೂಪಾಯಿ ಸುಲಿಗೆ ಮಾಡಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮೂಡುಬಿದಿರೆಯ ಯುವತಿ ಸಹಿತ 7 ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‌ದೀಪ್ ಆರ್ ಜೈನ್, ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ತನ್ನ ಖೆಡ್ಡಾಕ್ಕೆ ಬೀಳಿಸಿ ವಾಮಂಜೂರು ಸಮೀಪದ ರೆಸಾರ್ಟ್‌ಗೆ ಕರೆದಿದ್ದರು.
ರೆಸಾರ್ಟ್‌ನಲ್ಲಿರುವ ವೇಳೆ ಸ್ಥಳೀಯ ಕೆಲವು ಯುವಕರು ಯುವತಿ ಹಾಗೂ ಕೇರಳ ಮೂಲದ ವ್ಯಕ್ತಿಗಳ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ.
ಅಶ್ಲೀಲ ವಿಡಿಯೋವನ್ನು ಬಳಸಿಕೊಂಡು 10 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿರುವುದು ಗೊತ್ತಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಜೂ.14ರಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮೂಡುಬಿದಿರೆ ಮೂಲದ ಯುವತಿ ಹಾಗೂ ಪ್ರೀತಮ್, ಕಿಶೋರ್, ಮುರಳಿ, ಸುಶಾಂತ್, ಅಭಿ ಎಂಬುವವರನ್ನು ಬಂಧಿಸಲಾಗಿದೆ.
ಘಟನೆ ಬಗ್ಗೆ ಪೊಲೀಸರು ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.





