ಪುತ್ತೂರು: ಹೆರಿಗೆಗಾಗೆ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಮಹಿಳೆಯ ನಿವಾಸಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಸಾಂತ್ವನ: ವೈದ್ಯರಿಗೆ ಕರೆ ಮಾಡಿ ಮಗುವಿನ ಆರೋಗ್ಯ ವಿಚಾರಣೆ
ಪುತ್ತೂರು: ಹೆರಿಗೆಗಾಗೆ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಮಹಿಳೆಯ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.





