Be-Tech ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಪ್ರೇಮವೈಫಲ್ಯದಿಂದ ಮನನೊಂದ ಯುವತಿ ಚಿತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶದ ಧರ್ಮಾವರಂ ನ ನಿಹಾರಿಕಾ (22) ಮೃತ ಯುವತಿ. ಬೆಂಗಳೂರಿನಲ್ಲಿ B-Tech ಓದುತ್ತಿದ್ದ ನಿಹಾರಿಕಾ ಪಿಜಿಯಲ್ಲಿ ವಾಸವಿದ್ದಳು.
ಆಂಧ್ರಪ್ರದೇಶದ ತೆನಾಲಿ ಮೂಲದ ಅಜಯ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕಾರಣಾಂತರಗಳಿಂದ ಇಬ್ಬರ ಮಧ್ಯೆ ವೈಮನಸ್ಯ ಮೂಡಿ ಬ್ರೇಕಪ್ ಮಾಡಿಕೊಂಡಿದ್ದರು ಎನ್ನಲಾಗಿದೆ.





