ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಸಾವು: ಪೊಲೀಸ್ ಠಾಣೆಯ ಮೆಟ್ಟಿಲೇರಿದ ಕುಟುಂಬಸ್ಥರು
ಬೆಳಗಾವಿ: ಬೆಳಗಾವಿಯ ಗ್ರೇಡ್ 2 ತಹಶೀಲ್ದಾರ್ ಸಾವು ಪ್ರಕರಣಕ್ಕೆ ಅಶೋಕ್ ಮಣ್ಣೀಕೇರಿ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ಸಂಬಂಧ ಕುಟುಂಬಸ್ಥರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಬೆಳಗಾವಿ ಎಸಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬಸ್ಥರು ವಾಸವಿದ್ದರು.
ತಡರಾತ್ರಿ ಹೃದಯಾಘಾತವಾಗಿದೆ ಎಂದು ಆತನ ಪತ್ನಿ ಮತ್ತು ಸಹೋದರ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅಶೋಕ್ ಮಣ್ಣಿಕೇರಿ ಮೃತಪಟ್ಟಿದ್ದರು. ಅಶೋಕ್ ಮಣ್ಣಿಕೇರಿ ಸಾವಿನ ಬಗ್ಗೆ ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದರು.





