December 19, 2025

ಜುಲೈ 10ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಆರಂಭ: ಸಿಎಂ ಸಿದ್ದರಾಮಯ್ಯ ಮಾಹಿತಿ

0
IMG-20230701-WA0018.jpg

ಬೆಂಗಳೂರು; ಬಿಪಿಎಲ್‌ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡುವ ಪ್ರಕ್ರಿಯೆ ಜುಲೈ 10ರಿಂದ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡ್ತೇವೆ ಅಂತಾ ಹೇಳಲಾಗಿತ್ತು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಅಂತಾ ಹೇಳಿಲ್ಲ. ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಎಂದರು.

ಇನ್ನು ಈ ತಿಂಗಳಿನಿಂದಲೇ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡುತ್ತಿದ್ದು, ಗೃಹಜ್ಯೋತಿ ಯೋಜನೆಯಲ್ಲಿ ಆಗಸ್ಟ್ ತಿಂಗಳ ಬಿಲ್ ಉಚಿತ ಎಂದಿದ್ದಾರೆ.

5 ಕೆಜಿ ಅಕ್ಕಿ ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ 170 (ಪ್ರತಿ ಕೆ.ಜಿಗೆ 34) ನೀಡುತ್ತೇವೆ. 90 ಪರ್ಸೆಂಟ್​ ಅಕೌಂಟ್ ಇದೆ. ಅಕೌಂಟ್ ಇಲ್ಲದವರು ಮಾಡಿಸಬೇಕು. ಒಬ್ಬರಿಗೆ 170 ರೂಪಾಯಿ ಕೊಡುತ್ತೇವೆ. ಅಕ್ಕಿ ಸಿಗುವರೆಗೆ ಮಾತ್ರ ಈ ಹಣ ನೀಡುತ್ತೇವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!