March 13, 2026

ತುರ್ತಾಗಿ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ: ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದ ಕಾಂಗ್ರೆಸ್

0
IMG-20230701-WA0037.jpg

ಬೆಂಗಳೂರು: ಸರ್ಕಾರ ರಚಿಸಿ ತಿಂಗಳು ಕಳೆದರೂ, ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡದ ಬಿಜೆಪಿಯನ್ನು ಕಾಂಗ್ರೆಸ್ ಟ್ವೀಟ್ ಮೂಲಕ ಕಾಲೆಳೆದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ , ತುರ್ತಾಗಿ ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ” ಎಂದು ಲೇವಡಿ ಮಾಡಿದೆ.

ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ವ್ಯಂಗ್ಯವಾಡಿದೆ.

Leave a Reply

Your email address will not be published. Required fields are marked *

error: Content is protected !!