ವಿಟ್ಲ: ಆತ್ಮಹತ್ಯೆಗೆ ಯತ್ನಿಸಿದ ಗಂಡ-ಹೆಂಡತಿ: ಪತಿ ಮೃತ್ಯು, ಪತ್ನಿ ಗಂಭೀರ
ವಿಟ್ಲ: ಗಂಡ-ಹೆಂಡತಿ ಇಬ್ಬರು ಆತ್ಮಹತ್ಯೆಗೆ ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆಯಲ್ಲಿ ನಡೆದಿದೆ.
ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆ. ಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತಿ, ಪತ್ನಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಅರುಣ್ ಪುತ್ತಿಲ ಭೇಟಿ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು.





