February 3, 2026

ಬೆಳ್ತಂಗಡಿ | ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ: ಮಹಿಳೆ ಗಂಭೀರ ಗಾಯ

0
image_editor_output_image1509860909-1688367014416.jpg

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಕನ್ಯಾಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಅವರ ಪತ್ನಿ ಶ್ರೀರಕ್ಷಾ ಕಿಣಿ (22) ಅಪಘಾತಕ್ಕೀಡಾದವರು.

ಅಮೇಯ ಭಟ್‌ ಅವರು ತನ್ನ ತಾಯಿ ಮನೆ ಕನ್ಯಾಡಿಗೆ ತೆರಳಿದ್ದು, ಅಲ್ಲಿಂದ ಹಿಂದಿರುಗಿ ಬೆಳ್ತಂಗಡಿಗೆ ಬರುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ರಮೇಶ್‌ ಎಂಬಾತ ಚಲಾಯಿಸುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಹತ್ಯಡ್ಕದ ಸತೀಶ್‌ ಶೆಟ್ಟಿ ಅವರು ಚಲಾಯಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ.

ಇನ್ನು ಢಿಕ್ಕಿಯ ರಭಸಕ್ಕೆ ಸ್ಕೂಟರ್‌ ಇಬ್ಭಾಗವಾಗಿ ಸಂಪೂರ್ಣ ಜಖಂಗೊಂಡು ಸವಾರೆ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆ ದೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸ ಲಾಗಿದೆ.

Leave a Reply

Your email address will not be published. Required fields are marked *

error: Content is protected !!