ಪ್ರೀತಿಸುವಂತೆ ಯುವಕನಿಂದ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ
ಮೈಸೂರು: ಪ್ರೀತಿಸುವಂತೆ ಹಿಂದೆ ಬಿದ್ದು ಕಿರುಕುಳ ನೀಡುತ್ತಿದ್ದ ಯುವಕನಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ.
ಯುವತಿ ಹರ್ಷಿತಾ (21) ಮೃತ ದುರ್ದೈವಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಹರ್ಷಿತಾ ಪೋಷಕರು ಆರೋಪಿಸಿದ್ದಾರೆ.




