ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿಯ ಗುಡ್ಡ ಕುಸಿತ
ಬಂಟ್ವಾಳ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಗಡಿಯಾರ ಸರಕಾರಿ ಶಾಲೆಯ ಬಳಿ ಗುಡ್ಡ ಕುಸಿತ ಉಂಟಾಗಿದೆ.
ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ, ಈ ಹಿನ್ನೆಲೆಯಲ್ಲಿ ಇಲ್ಲಿನ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಗಡಿಯಾರ ಎಂಬಲ್ಲಿರುವ ಹಳೆಯ ಕಾಲದ ಸರಕಾರಿ ಶಾಲೆಯೊಂದು ಅಪಾಯಕಾರಿ ಸನ್ನಿವೇಶದಲ್ಲಿ ಇದ್ದು ಊರಿನ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಸಿರೋಡು – ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುವ ವೇಳೆ ಶಾಲೆಯ ಕಟ್ಟಡದ ಅಂಚಿನ ತನಕ ಅಗೆಯಲಾಗಿದೆ.
ಮಣ್ಣು ಅಗೆದ ಪರಿಣಾಮವಾಗಿ ಇದೀಗ ಗುಡ್ಡ ಕುಸಿತವಾಗಿದೆ.




