February 4, 2026

ಉಡುಪಿ: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

0
image_editor_output_image553960824-1688400028883.jpg

ಉಡುಪಿ: ಬೀಡಿನಗುಡ್ಡೆಯ ನಾಗಬನ ಸಮೀಪದ ಹೊಳೆಗೆ ವ್ಯಕ್ತಿಯೋರ್ವ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ನಿವಾಸಿ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ಸ್ಥಳೀಯರು ಆತನ ಮೃತದೇಹವನ್ನು ಹೊರತೆಗೆದಿದ್ದು, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ.

ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!