ಕಾಸರಗೋಡಿನಲ್ಲಿ ಭಾರೀ ಮಳೆ ಹಿನ್ನೆಲೆ: ಜಿಲ್ಲೆಯಲ್ಲಿ ಜು. 4ರಂದು ಶಾಲೆಗಳಿಗೆ ರಜೆ ಘೋಷಣೆ
ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ನಾಳೆ(ಜುಲೈ 4) ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ.
ನಾಳೆ ಕಾಸರಗೋಡು ಜಿಲ್ಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ, ನಾಳೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.




