ಪ್ರೀತಿಸಿ ಮದುವೆಯಾದ ಪತ್ನಿಯನ್ನು ಕೊಲೆಗೈದ ಪತಿ
ಹುಬ್ಬಳ್ಳಿ: ಪ್ರೀತಿಸಿ ಮದುವೆಯಾದ ಹೆಂಡತಿಯನ್ನ ಪತಿ ಕೊಲೆಗೈದು ಪರಾರಿಯಾದ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಮೃತಳನ್ನು ಸುಧಾ (20) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಶಿವಯ್ಯ ನಾಪತ್ತೆಯಾಗಿದ್ದಾನೆ.
ಬೆಳಗಿನ ಜಾವ ನೀರು ಬಂದಾಗ ಸುಧಾ ಬಾಗಿಲು ತೆಗಿದಿರಲಿಲ್ಲ. ಅಲ್ಲದೆ ಮಗು ಕೂಡಾ ಒಳಗೆ ಅಳುತ್ತಿರುವುದನ್ನು ಗಮನಿಸಿದ ಅಕ್ಕ ಪಕ್ಕದ ನಿವಾಸಿಗಳು ಬಾಗಿಲು ಒಡೆದಿದ್ದಾರೆ. ಈ ವೇಳೆ ಸುಧಾ ಸಾವಿಗೀಡಾಗಿರುವುದು ಬೆಳಕಿಗೆ ಬಂದಿದೆ.




