July 9, 2026

ಭಾರೀ ಮಳೆ: ಮಣಿಪಾಲದಲ್ಲಿ ರಸ್ತೆ ಬದಿಯಲ ಗುಡ್ಡ ಕುಸಿತ

0
image_editor_output_image-764175214-1688452276232.jpg

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸೋಮವಾರದಿಂದ ವ್ಯಾಪಕವಾಗಿ ಭಾರೀ ಮಳೆ ಸುರಿತಾ ಇದ್ದು, ಈ ನಿಟ್ಟಿನಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಮಳೆಯಿಂದಾಗಿ ಜಿಲ್ಲೆಯ ಮಣಿಪಾಲದಲ್ಲಿ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

ನಿರಂತರ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಜರಿಯುತ್ತಿದೆ ಅನ್ನುವ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ.

ಸದ್ಯ ಸಣ್ಣ ಪ್ರಮಾಣದಲ್ಲಿ ಗುಡ್ಡ ಜರಿದಿದ್ದು, ಮಳೆ ಹೀಗೆ ಮುಂದುವರಿದರೆ ರಸ್ತೆ ಸಂಚಾರ ಹಾಗೂ ಗುಡ್ಡದ ಮೇಲೆ ಇರುವ ಕಟ್ಟಡಗಳಿಗೆ ಹಾನಿಯಾಗುವ ಆತಂಕವನ್ನು ಸ್ಥಳೀಯ ನಿವಾಸಿಗಳು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!