March 13, 2026

ದ.ಕ ಜಿಲ್ಲೆಯಲ್ಲಿ (ನಾಳೆ)ಜು.5 ರಂದು ಶಾಲಾ-ಕಾಲೇಜ್ ಗಳಿಗೆ ರಜೆ ಘೋಷಣೆ:

0
image_editor_output_image807189515-1688437509717

ದ.ಕ‌ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ನಾಳೆಯೂ ( ಜು.5) ದ.ಕ‌ ಜಿಲ್ಲೆಯಲ್ಲಿ ಶಾಲೆ – ಪಿಯು ಕಾಲೇಜಿಗೆ ರಜೆ ಘೋಷಿಸಿ ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.ಜಿಲ್ಲೆಯಲ್ಲಿ ನಾಳೆಯ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ ದಿನವಿಡೀ ಮಳೆ ಸುರಿದಿದೆ. ಬುಧವಾರವೂ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ. ಪ್ರಮುಖವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!