March 13, 2026

ಕಾಲೇಜು ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

0
image_editor_output_image13463140-1688485291573.jpg

ಚಿಕ್ಕಬಳ್ಳಾಪುರ: ಕಾಲೇಜು ಹಾಸ್ಟೆಲ್‌ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ಪ್ರೀತಿ(21) ಸಾವನ್ನಪ್ಪಿದ ವಿದ್ಯಾರ್ಥಿನಿ. ಪ್ರೀತಿ ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜುವೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಳು.

ಮಂಗಳವಾರ ಕಾಲೇಜಿನ ವಸತಿನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೀತಿ ಪತ್ತೆಯಾಗಿದ್ದು, ಕೂಡಲೇ ಕಾಲೇಜು ಆಡಳಿತ ಮಂಡಳಿ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಅದಾಗಲೇ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!