March 13, 2026

ಉಳ್ಳಾಲ: ಮೋರಿ ದಾಟುವಾಗ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

0
image_editor_output_image-394663840-1688527064789

ಉಳ್ಳಾಲ: ಮೋರಿ ದಾಟುವಾಗ ಮಳೆ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52) ಎಂದು ಗುರುತಿಸಲಾಗಿದೆ.
ಮನೆ ಸಮೀಪದ ಮೋರಿ‌ ದಾಟುವ ಸಂದರ್ಭ ಸುರೇಶ್ ಗಟ್ಟಿ‌ ಆಯತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ವೃತ್ತಿಯಲ್ಲಿ ಪೈಂಟರ್ ಆಗಿರುವ ಅವರು ಕೆಲಸ ಮುಗಿಸಿ ಇಂದು ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!